ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ ಹಾಗೂ ಅವರಿಗೆ ಎಲ್ಲಿಂದ ಡ್ರಗ್ಸ್ ಲಭ್ಯವಾಗುತ್ತಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಇದರಿಂದ ಪೊಲೀಸರ ಕಾರ್ಯಾಚರಣೆಯು ಸುಲಭ ಎಂದು ಅವರು ತಿಳಿಸಿದರು.