ಕುಕ್ಕೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನ ಚಾಲಕ ಎದೆನೋವಿನಿಂದ ಅಸ್ವಸ್ಥಗೊಂಡ ಘಟನೆ ನಡೆದಿದೆ.ಕಡಬ ತಾಲೂಕಿನ ಆತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬಸ್ ಇದ್ದಕ್ಕಿದ್ದಂತೆ ನಿಧಾನಗೊಂಡಿದೆ. ಈ ವೇಳೆ ಜಾಗೃತಗೊಂಡ ನಿರ್ವಾಹಕ ಚಾಲಕನತ್ತ ಗಮನಿಸಿದ್ದು, ಚಾಲಕ ಎದೆನೋವಿನಲ್ಲಿ ಒದ್ದಾಡುವುದು ಕಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ನಿರ್ವಾಹಕ ಚಾಲಕನ ಮೂಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅವರನ್ನು ಸೀಟೊಂದರಲ್ಲಿ ಮಲಗಿಸಿ ತಾನೇ ಬಸ್ ಚಲಾಯಿಸಿಕೊಂಡು ಉಪ್ಪಿನಂಗಡಿ ತನಕ ಕರೆ ತಂದಿದ್ದಾರೆ.
ಉಪ್ಪಿನಂಗಡಿಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆ ತರಲಾಗಿದೆ. ಬಸ್ ನಲ್ಲಿ ಮೂವತ್ತು ಜನ ಪ್ರಯಾಣಿಕರಿದ್ದು, ಬಸ್ ನಿರ್ವಾಹಕನ ಸಮಯಪ್ರಜ್ಞೆಯನ್ನು ಮೆಚ್ಚಿಕೊಂಡಿದ್ದಾರೆ. ಬಸ್ ಚಾಲಕ ಗಣಪತಿ ಅವರು ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.