Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಪರಶುರಾಮನ ಶಿಲ್ಪಿ ಕೃಷ್ಣ ನಾಯ್ಕ್‌ಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಕಾರ್ಕಳ: ಪರಶುರಾಮನ ಶಿಲ್ಪಿ ಕೃಷ್ಣ ನಾಯ್ಕ್‌ಗೆ ಜಾಮೀನು ಮಂಜೂರು

    December 9, 2024
    Share

    ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೂರ್ತಿ ನಿರ್ಮಾಣ ಮಾಡಿರುವ ಕೃಷ್ ಆರ್ಟ್ ವಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ಗೆ ಜಾಮೀನು ಮಂಜೂರು ಆಗಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಲ್ಪಿ ಕೃಷ್ಣ ನಾಯ್ಕ್‌ಗೆ ಡಿಸೆಂಬರ್ 7 ರಂದು ಜಾಮೀನು ಮಂಜೂರುಗೋಳಿಸಿದೆ.

    ಬೈಲೂರು ಪರಶುರಾಮ ಥೀಮ್ ಪಾರ್ಕಿನಲ್ಲಿ ನಿರ್ಮಿಸಿದ ಮೂರ್ತಿಯ ವಿಚಾರದಲ್ಲಿ ಕೃಷ್ಣ ಶೆಟ್ಟಿ ಬಜಗೋಳಿಯವರು ಶಿಲ್ಪಿ ವಿರುದ್ಧ ದೂರು ದಾಖಲಿಸಿದ್ದರು. ಈ ಬಗ್ಗೆ ನ್ಯಾಯಾಲಯದಲ್ಲಿ ನವೆಂಬರ್ 4 ರಂದು ವಿಚಾರಣೆ ನಡೆದಿತ್ತು. ನಾಯಾಧೀಶರು ವಾದ ಪ್ರತಿವಾದವನ್ನು ಆಲಿಸಿ ನಿರೀಕ್ಷಣಾ ಜಾಮೀನನ್ನು ನವೆಂಬರ್ 7ಕ್ಕೆ ಕಾಯ್ದಿರಿಸಿದ್ದರು. ಆದರೆ ನ. 7ರಂದು ಕಾಯ್ದಿರಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯು ತಿರಸ್ಕಾರವಾಗಿತ್ತು.

    ಇದರಿಂದ ಕಾರ್ಕಳ ನಗರ ಪೊಲೀಸರು ನ. 10ರಂದು ಶಿಲ್ಪಿಯನ್ನು ಕೇರಳದಲ್ಲಿ ಬಂಧಿಸಿ ನವೆಂಬರ್ 11ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪೊಲೀಸರು ಹೆಚ್ಚಿನ ತನಿಖೆಗೆ ಶಿಲ್ಪಿಯನ್ನು 7 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ನಂತರ ನವೆಂಬರ್ 15ರಂದು ಪೊಲೀಸರು ಕ್ರಷ್ಣ ನಾಯ್ಕ್‌ರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಕೃಷ್ಣ ನಾಯ್ಕ್ ಪರ ವಕೀಲರು ಜಾಮೀನಿಗಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

    ಡಿಸೆಂಬರ್ 7ರಂದು ನ್ಯಾಯಾಲಯವು ಕೃಷ್ಣನಾಯಕ್ ಅವರಿಗೆ 1ಲಕ್ಷ ವೈಯಕ್ತಿಕ ಬಾಂಡ್, ಇಬ್ಬರು ಶ್ಯೂರಿಟಿಯೊಂದಿಗೆ ಹಾಗೂ ಹಲವಾರು ಷರತ್ತುಗಳೊಂದಿಗೆ ಜಾಮೀನು ಮಂಜೂರುಗೊಳಿಸಿದೆ. ಆರೋಪಿ ಪರ ಮಟ್ಟಾರು ರತ್ನಾಕರ ಹೆಗ್ಡೆ ವಾದಿಸಿದ್ದರು.

    Post Views: 200

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.