ಮಂಗಳೂರು:ಸುರತ್ಕಲ್,ಮುಲ್ಕಿ, ಬಜಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸುರತ್ಕಲ್ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಸುರತ್ಕಲ್, ಮುಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜೊತೆಗೆ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ಇಂದು (ಜು.29) ರಜೆ ಘೋಷಿಸಲಾಗಿದೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಮನವಿಯಂತೆ ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶಿಸಿದ್ದಾರೆ.