Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು- ಆರೋಪಿ ಅರೆಸ್ಟ್‌..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು- ಆರೋಪಿ ಅರೆಸ್ಟ್‌..!

    December 11, 2024
    Share

    ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ.

    ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ. ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಕಲಂ 303(2) ಬಿಎನ್ ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು 24 ಗಂಟೆಯೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ. ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಆಕ್ಸೆಸ್ ಸ್ಕೂಟರ್ ಸೇರಿದಂತೆ ಒಟ್ಟು 7,30,000ರೂ. ಮೌಲ್ಯದ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಂತೆ ಸಿದ್ದಾರ್ಥ ಗೋಯಲ್ (ಕಾ&ಸು) ಮತ್ತು ಕೆ.ರವಿಶಂಕರ್ ಡಿಸಿಪಿ ಕ್ರೈಂ ಅವರ ನಿರ್ದೇಶನದಂತೆ ಹಾಗೂ ಮಂಗಳೂರು ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪಿಎಸ್‌ಐ ಉಮೇಶ್ ಕುಮಾರ್ ಎಂ.ಎನ್ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

    Post Views: 212

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.