Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಸರಕಾರಿ ಆಸ್ಪತ್ರೆ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ-ದೂರು
    ಇತ್ತೀಚಿನ ಸುದ್ದಿ

    ಪುತ್ತೂರು: ಸರಕಾರಿ ಆಸ್ಪತ್ರೆ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ-ದೂರು

    December 13, 2024
    Share

    ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ತೆರಳುತ್ತಿದ್ದ ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ವೈದ್ಯರು ಕರ್ತವ್ಯಕ್ಕೆ ತಡವಾಗಿ ಹೋಗುತ್ತಿದ್ದಾರೆಂದು ಸುಳ್ಳು ಆಪಾದನೆ ಹೊರಿಸಿ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಸರಕಾರಿ ಆಸ್ಪತ್ರೆಯಿಂದ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

    ಡಿ.10ರಂದು ಬೆಳಗ್ಗೆ ಪುಂಜಾಲಕಟ್ಟೆ ಯಿಂದ ಸುಮಾರು 29 ವರ್ಷದ ವ್ಯಕ್ತಿ ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಯ ಮೊದಲು ಪೊಲೀಸ್‌ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿತ್ತು. ಪರೀಕ್ಷೆಗೆ ಪುಂಜಾಲ ಕಟ್ಟೆಯಿಂದ ಪೊಲೀಸರು ಬರಬೇಕಾ ಗಿತ್ತು. ಪೊಲೀಸರು ಮಧ್ಯಾಹ್ನದ ಬಳಿಕ ಬಂದಿದ್ದರು. ಬಳಿಕ ಅವರು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಮನವಿ ನೀಡುವ ಕಾರ್ಯ ಮಾಡಿದರು.

    ಸಂಜೆ ವೇಳೆ ಎಲ್ಲ ಪ್ರಕ್ರಿಯೆ ಮುಗಿದು ಕರ್ತವ್ಯದಲ್ಲಿದ್ದ ಡಾ.ಶ್ವೇತಾ ಮರಣೋತ್ತರ ಪರೀಕ್ಷೆಗೆ ಹೋಗುವ ಸಂದರ್ಭ ಮೃತರ ಕಡೆಯವರು ಎನ್ನಲಾದ ಕೆಲವರು ವೈದ್ಯರು ತಡವಾಗಿ ಬಂದಿರುವುದಾಗಿ ಆರೋಪಿಸಿ ಅವರನ್ನು ತರಾಟೆಗೆತ್ತಿಕೊಂಡು ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವೇಳೆ ವೈದ್ಯರು ಶಸ್ತ್ರಚಿಕಿತ್ಸಾ ಸಂದರ್ಭ ಬಿಟ್ಟು ಬರಲಾಗುವುದಿಲ್ಲ ಎಂದು ಹೇಳಿದರೂ ಅಲ್ಲಿ ನೆರೆದವರು ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

    ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್‌ ರೈ, ವೈದ್ಯೆ ಡಾ| ಶ್ವೇತಾ, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಆಶಾ ಪುತ್ತೂರಾಯ ಅವರು ಸರಕಾರಿ ಕರ್ತವ್ಯದ ವೇಳೆ ಅಡ್ಡಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆಪಾದನೆಯ ವೀಡಿಯೋ ಹಾಕಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Post Views: 188

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.