Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಯಕ್ಷಗಾನ ರಂಗದ ಮೊದಲ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ
    Uncategorized

    ಯಕ್ಷಗಾನ ರಂಗದ ಮೊದಲ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ

    December 15, 2024
    Share

    ಮಂಗಳೂರು: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ.

    ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾಗವತರಾಗಿ ಮನೆಮಾತಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ 2010ನೇ ಸಾಲಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ. 2012ರಲ್ಲಿ ಕರ್ನಾಟಕ ಸರಕಾರದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿಗೂ ಭಾಜನರಾಗಿದ್ದಾರೆ.

    ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹತ್ತು ವರ್ಷ ಹಾಗೂ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಭಾಗವತಿಕೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಟೀಲು, ಮೂಡುಬಿದಿರೆ ಹಾಗೂ ತಮ್ಮದೇ ಮನೆಯಲ್ಲಿ ಹಲವು ಮಂದಿಗೆ ಭಾಗವತಿಕೆ ಹೇಳಿಕೊಟ್ಟಿದ್ದಾರೆ. ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.

    Post Views: 178

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.