ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ಗಳು ಪತ್ತೆಯಾಗಿವೆ.
ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್ಗಳು ಪತ್ತೆಯಾಗಿವೆ. ನಾಡಬಾಂಬ್ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2 ಬೈಕ್ ಹಾಗೂ 32 ನಾಡಬಾಂಬ್ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.