ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.
ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.
ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.