ಮಂಗಳೂರು: ಹೊಸವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ, ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸಲು ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಹೊಸವರ್ಷದ ಆಚರಣೆಯ ನೆಪದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ವೀಲಿಂಗ್/ಡ್ರಾಗ್ ರೇಸ್‌ಗಳಲ್ಲಿ ಭಾಗಿಯಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಮಾರ್ಗಸೂಚಿಗಳು ಈ ರೀತಿಯಿದೆ * ಅಮಲು ಪದಾರ್ಥವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದು.
* ದ್ವಿಚಕ್ರ ವಾಹನಗಳಲ್ಲಿ ಎರಡಕ್ಕಿಂತ ಹೆಚ್ಚು ಮಂದಿ ಸವಾರಿ ಮಾಡಬಾರದು.
* ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವವವರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು.
* ಕಾರು ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು.
* ಸಾರ್ವಜನಿಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ/ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಾರ್ಕ್ ಮಾಡುವುದು.
* ಮಂಗಳೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ರಸ್ತೆಗಳಲ್ಲಿ/ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ ತಪಾಸಣೆ ನಡೆಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತಕ್ರಮ ಕೈಗೊಳ್ಳಲಾಗುವುದು.
* ನಗರದ ಪ್ರಮುಖ ಜಂಕ್ಷನ್ / ರಸ್ತೆಗಳಲ್ಲಿ ಸಿಸಿಟಿವಿ ಗಳನ್ನು ಆಳವಡಿಸಲಾಗಿದ್ದು, ಕಮಾಂಡ್ & ಕಂಟ್ರೋಲ್ ಸೆಂಟರ್ ಮೂಲಕ ನಿಗವಹಿಸಲಾಗುವುದು.
* ಸಾರ್ವಜನಿಕರಿಗೆ ತೊಂದರೆಯಾಗುವಂತಹ / ಮೇಲಿನ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಮಾಹಿತಿ ನೀಡಲು ಕೋರಲಾಗಿದೆ.