ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3 ರಂದು ಮುಂಜಾನೆ 5.30 ಕ್ಕೆ ಬಾಡಿಗೆ ಕೊಠಡಿಯ ಸಮೀಪ ಶೌಚಾಲಯದ ಬಳಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಟಿ ಎಂ ಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ, ಪ್ರಮೀಳಾ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.