Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

    January 7, 2025
    Share

    ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್‌ ದೇವರಾಜ್‌ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಬಜಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ. 10ರಂದು ಘಟನೆ ನಡೆದಿತ್ತು. ಆರೋಪಿ ಗಗನ್‌ (24) ಮನೆಯೊಂದರ ಕಾಂಪೌಂಡ್‌ ಗೋಡೆಯೇರಿ ಎಕ್ಸಾಸ್ಟ್‌ ಫ್ಯಾನ್‌ ಹಾಕಲೆಂದು ಬಿಟ್ಟಿದ್ದ ಕಿಟಕಿಯಲ್ಲಿ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ್ದ. ಪ್ರಕರಣ ನಡೆದು 9 ತಿಂಗಳಲ್ಲಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಆರೋಪಿಗೆ 1 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 10 ಸಾವಿರ ರೂ.ಗಳನ್ನು ಅಲ್ಲದೆ ಪ್ರತ್ಯೇಕವಾಗಿ 1 ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.

    ಪ್ರಾಸಿಕ್ಯೂಷನ್‌ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು. ಆರೋಪಿ ಚಿತ್ರೀಕರಿಸಿದ್ದ ದೃಶ್ಯಗಳನ್ನು ಡಿಲೀಟ್‌ ಮಾಡಿದ್ದರೂ, ಸಾಕ್ಷಿಗಳ ಹೇಳಿಕೆಯ ಆಧಾರದಲ್ಲಿ ಶಿಕ್ಷೆ ವಿಧಿಸಲಾಗಿದೆ.

    ಬಾತ್‌ರೂಮ್‌ನ ವೀಡಿಯೋ ಚಿತ್ರೀಕರಿಸಿರುವ ಕುರಿತಂತೆ 14 ಪ್ರಕರಣಗಳು ನ್ಯಾಯಾಲಯಕ್ಕೆ ವಿಚಾರಣೆಗೆ ಬಂದಿದ್ದು ಈ ಬೆಳವಣಿಗೆಗಳು ತುಂಬಾ ಕಳವಳಕಾರಿಯಾಗಿದೆ. ಇಂತಹ ಪ್ರಕರಣಗಳಲ್ಲಿ 5 ವರ್ಷಗಳಿಂದ 7 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ. ಈ ಬಗ್ಗೆ ನಾನಾ ಕ್ಷೇತ್ರಗಳ 6 ಮಂದಿಯ ಸಮಿತಿ ರಚಿಸಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ.

    Post Views: 284

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.