ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ಮೋಸಗೊಳಿಸಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿ, ಪಿರ್ಯಾದಿದಾರರಿಂದ 10,32,000 ರೂಪಾಯಿ ಹಣವನ್ನು ವಂಚಿಸಿದ್ದರು.
ಪೊಲೀಸರು ನಡೆಸಿದ ತನಿಖೆಯಲ್ಲಿ, ಪಿರ್ಯಾದಿದಾರರಿಂದ ವರ್ಗಾವಣೆಯಾದ ಹಣವು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದು ಕಂಡುಬಂದಿದೆ. ಈ ಸಂಬಂಧ ಕೇರಳದ ತ್ರಿಶೂರ್ ಜಿಲ್ಲೆಯ ನಿಧಿನ್ ಕುಮಾರ್ ಕೆ.ಎಸ್ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.