Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು ಇನ್ನಾದಲ್ಲಿ ಪತ್ತೆ: ಕಾರ್ ನಲ್ಲಿ ರಕ್ತದ ಕಲೆ
    ಕರಾವಳಿ ಸುದ್ದಿ

    ಮಂಗಳೂರು: ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು ಇನ್ನಾದಲ್ಲಿ ಪತ್ತೆ: ಕಾರ್ ನಲ್ಲಿ ರಕ್ತದ ಕಲೆ

    July 31, 2022
    Share

    ಕಾರ್ಕಳ : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರಿ ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ.

    ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸ ಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ..ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದರು.

    ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಟೋಲ್ ಗೇಟ್ ಅನ್ನು ತಪ್ಪಿಸಿದ್ದಾರೆ ಎನ್ನಲಾಗುತ್ತಿದೆ.

    Post Views: 232

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.