Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ತಲೆಮರೆಸಿಕೊಂಡಿದ್ದ ಅಂತರಾಜ್ಯ ಕಳ್ಳತನ ಆರೋಪಿ ಸೂರಜ್ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ತಲೆಮರೆಸಿಕೊಂಡಿದ್ದ ಅಂತರಾಜ್ಯ ಕಳ್ಳತನ ಆರೋಪಿ ಸೂರಜ್ ಬಂಧನ

    January 11, 2025
    Share

    ಪುತ್ತೂರು: ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಅಂತರಾಜ್ಯ ಮನೆ ಕಳ್ಳತನದ ಪ್ರಮುಖ ಆರೋಪಿ ಕೇರಳ ಮೂಲದ ಸೂರಜ್‌ ಕೆ ಎಂದು ಗುರುತಿಸಲಾಗಿದೆ.

    ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಸರ್ವೆ ಭಕ್ತಕೋಡಿ ಎಂಬಲ್ಲಿ ಡಿಸೆಂಬರ್‌ 20 ರಂದು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡ್ರೆಜನ್ನು ಮೀಟಿ ಚಿನ್ನಾಭರಣವನ್ನು ಕಳವು ಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಕಳ್ಳತನ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿ ಕೇರಳ ಮೂಲದ ಸೂರಜ್‌ ಕೆ (36 ವರ್ಷ) ಎಂಬಾತನನ್ನು ಕಳ್ಳತನಕ್ಕೆ ಬಳಸುತ್ತಿದ್ದ ಕಾರು ಸಮೇತ ಬಂಧಿಸುವಲ್ಲಿ ಅಪರಾಧ ಪತ್ತೆ ತಂಡದವರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

    Post Views: 234

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.