Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾರ್ಟಿಯಲ್ಲಿ ಯುವತಿಯ ಅತ್ಯಾಚಾರಗೈದ ಅಪರಾಧಿಗೆ 10 ವರ್ಷ ಕಠಿಣ ಸಜೆ, ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಪಾರ್ಟಿಯಲ್ಲಿ ಯುವತಿಯ ಅತ್ಯಾಚಾರಗೈದ ಅಪರಾಧಿಗೆ 10 ವರ್ಷ ಕಠಿಣ ಸಜೆ, ದಂಡ

    January 11, 2025
    Share

    ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಹಂಪನಕಟ್ಟೆ ಲೈಟ್‌ಹೌಸ್‌ಹಿಲ್ ರೋಡ್ ನಿವಾಸಿ ಬ್ರಯಾನ್ ರಿಚರ್ಡ್ ಅಮನ್ನಾ (34) ಶಿಕ್ಷೆಗೊಳಗಾದ ಅಪರಾಧಿ ಸಂತ್ರಸ್ತ ಯುವತಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಗೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ಜಾಯ್‌ಲಿನ್ ಗ್ಲಾನೆಲ್ ಪಿಂಟೋ ಎಂಬಾತ ಪರಿಚಿತನಾಗಿದ್ದ. ಆತನಿಗೆ ಅಂಡಮಾನ್‌ಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ 2021ರ ಫೆ.5ರಂದು ಸ್ನೇಹಿತರಿಗಾಗಿ ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೊಡಿಕಾಡು ಎಂಬಲ್ಲಿನ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಯುವತಿಯೂ ಭಾಗವಹಿಸಿದ್ದರು. ಈ ಪಾರ್ಟಿಗೆ ಕ್ಯಾಟರಿಂಗ್ ಸರಬರಾಜಿನ ವ್ಯವಸ್ಥೆ ಮಾಡಿದ್ದ ಬ್ರಯಾನ್ ಅಮನ್ನಾ ಯುವತಿಗೆ ತನ್ನನ್ನು ಜಾಯಿಲಿನ್ ಸ್ನೇಹಿತ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ವೈನ್‌ಗೆ ಪ್ರಜ್ಞೆ ತಪ್ಪುವ ಅಮಲು ಪದಾರ್ಥವನ್ನು ಬೆರೆಸಿ ಅದನ್ನು ಯುವತಿಗೆ ಒತ್ತಾಯಪಡಿಸಿ ನೀಡಿದ್ದ. ಬಳಿಕ ಯುವತಿ ಕೊಠಡಿಗೆ ಹೋಗಿ ನಿದ್ದೆ ಮಾಡಿದ್ದಳು. 5ಗಂಟೆ ವೇಳೆ ಎಚ್ಚರವಾದಾಗ ಬ್ರಯಾನ್ ಅಮನ್ನಾ ಆಕೆಯ ಮೇಲೆ ಅತ್ಯಾಚಾರ ನಡೆಸಿ ಎಸಗುತ್ತಿದ್ದ. ಅದರಂತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಠಾಣಾ ನಿರೀಕ್ಷಕ ತಿಮ್ಮಪ್ಪ ನಾಯ್ಕ ತನಿಖೆ ಪೂರ್ಣಗೊಳಿಸಿ ಬ್ರಯಾನ್ ಅಮನ್ನಾ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 376ರಡಿ 10ವರ್ಷ ಕಠಿನ ಕಾರಾಗೃಹವಾಸ ಶಿಕ್ಷೆ ಮತ್ತು 10ಸಾವಿರ ರೂ. ದಂಡ, ಕಲಂ 378ರಡಿ 5ವರ್ಷ ಕಾರಾಗೃಹವಾಸದ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಯುವತಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ಭಾಗಶಃ ಸಾಕ್ಷಿ ವಿಚಾರಣೆಯನ್ನು ಸರಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ನಡೆಸಿದ್ದು, ಸರಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಉಳಿದ ಸಾಕ್ಷಿ ವಿಚಾರಣೆ ನಡೆಸಿದ್ದಾರೆ.

    Post Views: 185

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.