Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಂಬಳಕ್ಕೆ ಜಾತಿ-ಧರ್ಮದ ಬೇಲಿ ಇಲ್ಲ: ಈ ಕ್ರೀಡೆಗೆ ಸಿಎಂ ಸಿದ್ದರಾಮಯ್ಯ ಬಹುಪರಾಕ್
    ಇತ್ತೀಚಿನ ಸುದ್ದಿ

    ಕಂಬಳಕ್ಕೆ ಜಾತಿ-ಧರ್ಮದ ಬೇಲಿ ಇಲ್ಲ: ಈ ಕ್ರೀಡೆಗೆ ಸಿಎಂ ಸಿದ್ದರಾಮಯ್ಯ ಬಹುಪರಾಕ್

    January 12, 2025
    Share

    ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

    ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎಂದರು. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದು ತಿಳಿಸಿದರು.

    ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದರು.

    ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ ಎಂದರು.

    24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕರ ನೀಡಿದೆ ಎಂದು ತಿಳಿಸಿದರು.

    ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

    Post Views: 162

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.