ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವನ್ಯಜೀವಿ ಭೇಟೆಗೆ ಮುಂದಾಗಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕುದುರೆಮುಖ ವನ್ಯಜೀವಿ ವಿಭಾಗದ ಮಾಳ ಗ್ರಾಮದ ಮುಳ್ಳೂರು ಅರಣ್ಯ ತನಿಖಾ ಠಾಣೆ ವ್ಯಾಪ್ತಿಯಲ್ಲಿ ಜ.9 ರಂದು ಘಟನೆ ಸಂಭವಿಸಿದ್ದು, ಅಂದು ರಾತ್ರಿ ಐದಾರು ಮಂದಿ ಕಾರಿನಲ್ಲಿ ಬಂದೂಕು ಮತ್ತು ಕೊಟ್ರೇಟ್ಟ್ನೊಂದಿಗೆ ಬೇಟೆಗೆ ಹೊಂಚು ಹಾಕುತ್ತಿದ್ದು, ಈ ವೇಳೆ ಕಾರ್ಕಳ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಮಂಗಳೂರು ಕಾಟಿಪಳ್ಳ ನಿವಾಸಿ ಪಾಸ್ವಿಮ್ ಆಲಿ (35) ಎಂಬಾತನನ್ನು ಬಂಧಿಸಲಾಗಿದ್ದು, ಉಳಿದವರು ಕಾರು ಮತ್ತು ಬಂದೂಕಿನೊಂದಿಗೆ ಪರಾರಿಯಾಗಿದ್ದಾರೆ.