ಪುತ್ತೂರು : ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಸ್ಕೂಟರ್ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ಯುವಕನನ್ನು ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಉಸ್ಮಾನ್ (26) ಎಂದು ತಿಳಿಯಲಾಗಿದೆ.
ರಸ್ತೆಯ ಎಡ ಬದಿಯ ಮಣ್ಣು ರಸ್ತೆಯಲ್ಲಿ ಸ್ಕೂಟರನ್ನು ನಿಲ್ಲಿಸಿ ಸ್ಕೂಟರಿನ ಮೇಲೆ ಕುಳಿತುಕೊಂಡು ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ಉಸ್ಮಾನ್ ಅವರ ಸ್ಕೂಟರಿಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಚರಂಡಿಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಚಾಲಕ ಸದಾಶಿವ ಶೆಟ್ಟಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಸರ್ವಾಣಿ, ಮೀನಾಕ್ಷಿ, ಪವಿತ್ರಾ ಶೆಟ್ಟಿ, ನಂದನ್ ರೈ ಗಾಯಗೊಂಡಿದ್ದಾರೆ.