ಉಡುಪಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ನಡೆದಿದ್ದು, ಆತಂಕ ಸೃಷ್ಟಿಸಿದೆ.
ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಿಗಾ ವಹಿಸುತ್ತಿದ್ದಾರೆ.