Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ- 14 ಮಂದಿಗೆ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ- 14 ಮಂದಿಗೆ ನ್ಯಾಯಾಂಗ ಬಂಧನ

    January 25, 2025
    Share

    ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿರುವ ಪ್ರಕರಣದ ರಾಮಸೇನಾ ಸಂಘಟನೆಯ 13 ಮಂದಿ ಕಾರ್ಯಕರ್ತರು ಹಾಗೂ ಓರ್ವ ಟಿವಿ ಕ್ಯಾಮರಾಮ್ಯಾನ್‌ಗೆ ಮಂಗಳೂರು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ರಾಮಸೇನಾ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14‌ ಮಂದಿಯನ್ನು ಬರ್ಕೆ ಪೊಲೀಸರು ಮಂಗಳೂರು ಜೆಎಂಎಫ್‌ಸಿ 6ನೇ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ‌. ನ್ಯಾಯಾಲಯವು ಫೆ.7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಬೆಳಗ್ಗೆ ಸುಮಾರು 11:50ರ ಸುಮಾರಿಗೆ 11ಮಂದಿಯ ತಂಡ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಮಸಾಜ್ ಪಾರ್ಲರ್‌ಗೆ ನುಗ್ಗಿ ದಾಂಧಲೆ ನಡೆಸಿತ್ತು.

    ಮಸಾಜ್ ಪಾರ್ಲರ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿ ಮಹಿಳಾ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ್ದರು. ಅಷ್ಟು ಮಾತ್ರವಲ್ಲದೆ, ಪಾರ್ಲರ್ ಉಪಕರಣಗಳನ್ನು ಧ್ವಂಸಗೊಳಿಸಿ, ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದರು. ಆದ್ದರಿಂದ ಪಾರ್ಲರ್ ಮಾಲಕ ನೀಡಿದ ದೂರಿನ ಆಧಾರದ ಮೇಲೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 06/2025 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. BNS ನ ಸೆಕ್ಷನ್ 329(2), 324(5), 74, 351(3), 115(2), 109, 352, ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    Post Views: 250

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.