Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೂಗನಂತೆ ನಟಿಸಿ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೂಗನಂತೆ ನಟಿಸಿ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    January 26, 2025
    Share

    ಮಂಗಳೂರು: ಮೂಗನಂತೆ ನಟಿಸಿ ನೀರು ಕೊಟ್ಟ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2016ರ ನವೆಂಬರ್ 10-11ರ ರಾತ್ರಿ ವೃದ್ಧ ದಂಪತಿ ವರ್ಕಿ ಕೆ.ವಿ (85) ಮತ್ತು ಎಲಿಕುಟ್ಟಿ(80) ಎಂಬವರನ್ನು ರಾಜು ಕಲ್ಲವಡ್ಡರ್ ಕೊಲೆಗೈದು ಅವರ ಮನೆಯಲ್ಲಿದ್ದ ನಗ ನಗದು ಸೇರಿದಂತೆ 4.50 ಲಕ್ಷ ಮೌಲ್ಯದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

    ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ದರ್ ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳ್ತಂಗಡಿಯ ನೆರಿಯಾ ಗ್ರಾಮದ ಬಾಂಜಾರು ಮಲೆ ಎಂಬಲ್ಲಿ ಡ್ಯಾಂ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡುತ್ತಿದ್ದ. 2016ರ ನವೆಂಬರ್ 10ರಂದು ರಾತ್ರಿ 11ರಿಂದ ಬೆಳಗಿನ ಜಾವ 3ರ ಮಧ್ಯೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್ ಎಂಬಲ್ಲಿ ವಾಸವಿದ್ದ ವೃದ್ಧ ದಂಪತಿ ವರ್ಕಿ ಕೆ.ವಿ.(85) ಮತ್ತು ಎಲಿಕುಟ್ಟಿ (80) ಎಂಬವರ ಮನೆಗೆ ಬಂದಿದ್ದ.

    ಬಳಿಕ ಮೂಗನಂತೆ ನಟಿಸಿ, ಕುಡಿಯಲು ನೀರು ಕೇಳಿದ್ದಾನೆ. ಆ ಮೇಲೆ ದಾರಿ ತೋರಿಸಬೇಕು ಎಂದು ನೆಪವೊಡ್ಡಿದ್ದಾನೆ. ಅದರಂತೆ ವರ್ಕಿ ಕೆ.ವಿ. ಅವರು ರಾಜುವಿಗೆ ಕತ್ತಲೆಯಲ್ಲಿ ಟಾರ್ಚ್‌ಲೈಟ್ ಮೂಲಕ ದಾರಿ ತೋರಿಸುತ್ತಾ ಮುಂದೆ ಹೋಗಿದ್ದಾರೆ. ಈ ವೇಳೆ ಮನೆಯಿಂದ ಸುಮಾರು 70 ಮೀ. ದೂರದಲ್ಲಿ ಆತ ವರ್ಕಿಯವರಿಗೆ ಉರುಗೋಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಬಳಿಕ ಉಟ್ಟಿದ್ದ ಲುಂಗಿಯಿಂದಲೇ ಅವರ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ.

    ನಂತರ ಮನೆಯೊಳಗೆ ಪ್ರವೇಶಿಸಿ ಸೊತ್ತುಗಳನ್ನು ಜಾಲಾಡಿದ್ದಾನೆ. ಇದರಿಂದ ಎಚ್ಚರಗೊಂಡ ಎಲಿಕುಟ್ಟಿಯವರಿಗೂ ಆರೋಪಿಯು ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ಬಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಮನೆಯ ಗೋದ್ರೇಜ್, ಕಪಾಟುಗಳ ಬಾಗಿಲು ಮುರಿದು 25 ತೊಲ ಚಿನ್ನ ಹಾಗೂ ನಗದು ಸೇರಿದಂತೆ ಅಂದಾಜು 4,50,000 ರೂ.ಗಳನ್ನು ಕದ್ದೊಯ್ದಿದ್ದ.

    ವಿಚಾರಣೆ ಮುಗಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ಪ್ರಕರಣದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ಆರೋಪಿತ ತಪ್ಪಿತಸ್ಥನೆಂದು ತೀರ್ಪು ನೀಡಿದ್ದಾರೆ. ಅದರಂತೆ ಆರೋಪಿಗೆ ಭಾ.ದಂ.ಸಂ ಕಲಂ 392ಕ್ಕೆ 10 ವರ್ಷಗಳ ಕಾಲ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ. ಒಂದು ವೇಳೆ, ದಂಡ ಪಾವತಿಸಲು ವಿಫಲನಾದರೆ 3 ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು. ಭಾ.ದಂ.ಸಂ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ವಿಫಲನಾದಲ್ಲಿ 3 ತಿಂಗಳ ಕಠಿಣ ಸಜೆಯನ್ನು ವಿಧಿಸಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

    ಈ ಎರಡು ಶಿಕ್ಷೆಗಳನ್ನು ಒಂದರ ನಂತರ ಒಂದರಂತೆ ಅನುಭವಿಸಲು ಆದೇಶಿಸಲಾಗಿದೆ. ಅಪರಾಧಿ ದಸ್ತಗಿರಿಯಾದ ಕಾಲದಿಂದ ಈವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅವಧಿಯನ್ನು ಕಡಿತಗೊಳಿಸಿ, ಉಳಿದ ಅವಧಿಗೆ ಕಠಿಣ ಸಜೆ ಅನುಭವಿಸಲು ಆದೇಶ ಹೊರಡಿಸಲಾಗಿದೆ.

    Post Views: 270

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.