Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತುಳು ಸಿನಿಮಾ ”ಮೀರಾ“ ದ ಟೀಸರ್ ಬಿಡುಗಡೆ
    ಇತ್ತೀಚಿನ ಸುದ್ದಿ

    ಮಂಗಳೂರು: ತುಳು ಸಿನಿಮಾ ”ಮೀರಾ“ ದ ಟೀಸರ್ ಬಿಡುಗಡೆ

    January 30, 2025
    Share

    ಮಂಗಳೂರು: ತುಳು ಸಿನಿಮಾ ”ಮೀರಾ“ ದ ಟೀಸರ್ ಬಿಡುಗಡೆ ಕಾರ್ಯಕ್ರಮ  ನಗರದ ಖಾಸಗಿ ಹೋಟೆಲ್ ನಲ್ಲಿ ಜರುಗಿತು. 

    ಸಿನಿಮಾ ನಿರ್ಮಾಪಕ ಲಂಚುಲಾಲ್ ಮಾತಾಡಿ, “ಹೆಣ್ಣಿನ ಬದುಕಿನ ಕುರಿತಾದ ಕಥೆ ಎನ್ನುವ ಕಾರಣಕ್ಕೆ ಸಿನಿಮಾವನ್ನು ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದೇನೆ. ಫೆ.21ಕ್ಕೆ ನಮ್ಮ ಮೀರಾ ಸಿನಿಮಾ ಬಿಡುಗಡೆಯಾಗಲಿದೆ. ಎಲ್ಲರೂ ಸಿನಿಮಾ ನೋಡಿ ನಮ್ಮನ್ನು ಬೆಂಬಲಿಸಿ. ಸಿನಿಮಾದ ಸಂಗೀತ, ಹಾಡುಗಳು ಬಹಳ ಚೆನ್ನಾಗಿವೆ. ಚಿತ್ರತಂಡಕ್ಕೆ ನಿಮ್ಮ ಆಶೀರ್ವಾದ ಬೇಕು” ಎಂದರು.

    ಸಿನಿಮಾ ಬಗ್ಗೆ ಮಾತಾಡಿದ ನಟ ಮಂಜು ರೈ ಮೂಳೂರು “ತುಳು ಭಾಷೆಯ ಮೇಲಿನ ಅಭಿಮಾನದಿಂದ ಕೇರಳದಿಂದ ಬಂದ ಅಶ್ವಥ್ ಅನ್ನುವ ನಿರ್ದೇಶಕ ಮೀರಾ ಸಿನಿಮಾ ಮಾಡಿದ್ದಾರೆ. ಈ ಸಿನಿಮಾವನ್ನು ಗೆಲ್ಲಿಸುವುದು ತುಳುವರಾದ ನಮ್ಮೆಲ್ಲರ ಕರ್ತವ್ಯ. ತುಳು ಚಿತ್ರವನ್ನು ನೋಡಲು ಸಿನಿಮಾ ಮಂದಿರಕ್ಕೆ ಜನರು ಬರುವುದಿಲ್ಲ. ಈ ವೇಳೆಯಲ್ಲಿ ಲಂಚುಲಾಲ್ ದೊಡ್ಡ ಮನಸ್ಸು ಮಾಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಆಶಿರ್ವದಿಸಿ” ಎಂದರು.

    ಬಾಲನಟಿ ಲಕ್ಷ್ಯ ಮಾತಾಡಿ, “ಸಿನಿಮಾದಲ್ಲಿ ನಟಿಸುವ ಬಗ್ಗೆ ನನಗೆ ಆಸಕ್ತಿಯಿತ್ತು. ಈ ಸಿನಿಮಾ ನನಗೆ ಅವಕಾಶ ನೀಡಿತು. ತುಂಬಾ ಖುಷಿಯಾಗುತ್ತಿದೆ” ಎಂದರು.

    ನಟಿ ಇಶಿತಾ ಶೆಟ್ಟಿ ಮಾತಾಡಿ, “ನಾನು ಕಾಸರಗೋಡು ಮೂಲದವಳು. ನನಗೆ ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ” ಎಂದರು.

    ಇದೇ ಸಂದರ್ಭದಲ್ಲಿ ಬೀದಿನಾಯಿಗಳ ಆರೈಕೆಯಲ್ಲಿ ತೊಡಗಿರುವ ರಜನಿ ಶೆಟ್ಟಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

    ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

    Post Views: 219

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.