ಕೋರ್ಟ್ ವಾರೆಂಟ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿಯಲು ಪೊಲೀಸರು ಮನೆಯ ಬಳಿ ತೆರಳಿದಾಗ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರಿನ ಜೆಬಿ ನಗರದ ನ್ಯೂ ತಿಪ್ಪಸಂದ್ರದಲ್ಲಿ ನಡೆದಿದೆ. ಎಚ್ ಎ ಎಲ್ ಪೋಲಿಸರಿಂದ ಇದೀಗ ರೌಡಿ ಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಆರೋಪಿ ಸೈಕೋ ಕಿರಣ್ ಬಂಧಿಸಲು ಮನೆಯ ಬಳಿ ತೆರಳಿದ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ದ್ಯಾಗರ್ ಮೂಲಕ ಪೊಲೀಸ್ ಸಿಬ್ಬಂದಿ ಮೇಲೆ ಸೈಕೋ ಕಿರಣ ದಾಳಿ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಅಜರುದ್ದಿನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ನಂತರ ರೌಡಿಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಸೈಕೋ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದೆ.