Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಅಧಿಕಾರಿ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ- ಆರೋಪಿ ಅರೆಸ್ಟ್‌‌..!
    ಇತ್ತೀಚಿನ ಸುದ್ದಿ

    ಪೊಲೀಸ್ ಅಧಿಕಾರಿ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ- ಆರೋಪಿ ಅರೆಸ್ಟ್‌‌..!

    February 2, 2025
    Share

    ಬೆಂಗಳೂರು: ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.

    ಆರೋಪಿ ಹೋಮ್‌ಗಾರ್ಡ್‌ ಆಗಿದ್ದು, ಪೊಲೀಸ್ ಅಧಿಕಾರಿಯಂತೆ ಯುವತಿಯರ ರೂಮ್‍ಗೆ ರಾತ್ರಿ ವೇಳೆ ನುಗ್ಗುತ್ತಿದ್ದ. ಅಲ್ಲದೇ ಯುವತಿಯರ ಬಳಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ಕೊಡುತ್ತಿದ್ದ. ಕೇರಳದಿಂದ ಬೆಂಗಳೂರಿಗೆ ಬಂದು ಕಾಲೇಜೊಂದರಲ್ಲಿ 2ನೇ ವರ್ಷದ ಬಿಎಸ್‍ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೂವರು ಸ್ನೇಹಿತೆಯರ ಜೊತೆ ರೂಮ್ ಮಾಡಿಕೊಂಡಿದ್ದಳು. ಜ.25ರಂದು ಊಟ ಮಾಡಿ ಮಲಗಿದ್ದಾಗ ಆರೋಪಿ ಬಾಗಿಲು ತಟ್ಟಿದ್ದ. ಬಾಗಿಲು ತೆಗೆದಾಗ ನಾನು ಪೊಲೀಸ್ ಅಂತ ಹೇಳಿ ಒಳಗಡೆ ಹೋಗಿದ್ದ.

    ಆತ ಒಳಗೆ ಬರುತ್ತಿದ್ದಂತೆ ಯುವತಿ ಆಕೆಯ ಸ್ನೇಹಿತನಿಗೆ ಕರೆ ಮಾಡಿ ಪೊಲೀಸರು ಬಂದಿದ್ದಾರೆ ಎಂದು ತಿಳಿಸಿದ್ದಳು. ಆರೋಪಿ ಡೋರ್ ಲಾಕ್ ಮಾಡಿ, ಎಲ್ಲರ ಮೊಬೈಲ್‍ನ್ನು ಹೆದರಿಸಿ ಕಸಿದುಕೊಂಡಿದ್ದ. ಬಳಿಕ ಯುವತಿ ಕೈಯಲ್ಲಿದ್ದ ಹಾವಿನ ಟ್ಯಾಟೋ ನೋಡಿ ಅಶ್ಲಿಲವಾಗಿ ಮಾತನಾಡಿದ್ದ. ಅಲ್ಲದೇ ಯುವತಿ ಕರೆ ಮಾಡಿದ್ದಕ್ಕೆ ಬಂದಿದ್ದ ಆಕೆಯ ಸ್ನೇಹಿತರ ಮೊಬೈಲ್ ವಶಕ್ಕೆ ಪಡೆದು, ಯುವತಿರಿಗೆ ಮಂಡಿಕಾಲಿನಲ್ಲಿ ನಿಲ್ಲಿಸಿ ಟಾರ್ಚರ್ ನೀಡಿದ್ದ. 1:30 ಸುಮಾರಿಗೆ ಇನ್ನೊಬ್ಬ ಯುವಕ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಬರುತ್ತಿದ್ದಂತೆ ವ್ಯಕ್ತಿಯ ಬಣ್ಣ ಬಯಲಾಗಿದೆ.

    ಆರೋಪಿ ಕಳೆದ 6 ತಿಂಗಳಿನಿಂದ ಕ್ರೈಂ ಬ್ರಾಂಚ್ ಪೊಲೀಸ್ ಅಂತ ಹೇಳಿಕೊಂಡು ಯುವತಿಯರಿಗೆ ಹಾಗೂ ಆಕೆ ಗೆಳೆಯರಿಗೆ ಟಾರ್ಚರ್ ಕೊಡುತ್ತಿದ್ದ. ಈ ಬಗ್ಗೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ರಮೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 198

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.