ಮಹಿಳೆಗೆ ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬ್ಯಾಂಕ್ ಪ್ರತಿನಿಧಿಯ ಹೆಸರಿನಲ್ಲಿ ಮಹಿಳೆಗೆ ಸೈಬರ್ ವಂಚಕ ಕರೆ ಮಾಡಿ, “ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದು ಹೇಳಿದ್ದಾರೆ.
ಫೋನ್ ಕಾಲ್‌ಗೆ ಹೆದರಿ ತಕ್ಷಣವೇ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ “ನಿಮ್ಮ ಬ್ಯಾಂಕ್ ಮ್ಯಾನೇಜರ್‌ರನ್ನು ಸಂಪರ್ಕಿಸಿ” ಎಂದು ಕರೆ ಕಟ್ ಮಾಡಿದ್ದಾನೆ. ನಂತರ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಇರಲಿಲ್ಲ. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.