Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕನ ಎದೆಯಿಂದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು..!
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕನ ಎದೆಯಿಂದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು..!

    February 10, 2025
    Share

    ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಅಸ್ಸಾಂ ಮೂಲದ ಬಾಲಕ ಕಮಲ್ ಹಸನ್ (12 ವ) ಚಿಕಿತ್ಸೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಬಾಲಕ.

    ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಬಾಲಕ ಕಮಲ್ ಹಸನ್ ಹೆತ್ತವರುಕೂಲಿ ಕೆಲಸ ಮಾಡುತ್ತಿದ್ದರು.

    ಬಾಲಕ ಮನೆ ಬಳಿ ಶನಿವಾರ ಸಂಜೆ ಆಟವಾಡುತ್ತಿದ್ದಾಗ ಘಟನೆ ನಡೆದಿದೆ. ಈತ ಕತ್ತರಿಸಲ್ಪಟ್ಟ ತೆಂಗಿನ ಗರಿಯ ಮೇಲೆ ಬಿದ್ದ ರಬಸಕ್ಕೆ ತೆಂಗಿನ ಗರಿಯು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಪೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.

    ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಮಡಿಕೇರಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎನ್ನಲಾಗಿದೆ.

    ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಬಾಲಕ ಕಮಲ್ ಹಸನ್‌ನನ್ನು ಮಧ್ಯರಾತ್ರಿ ಹೊತ್ತಿಗೆ ದಾಖಲಿಸಲಾಗಿತ್ತು. ದೇಹಕ್ಕೆ ತೆಂಗಿನ ಗರಿ ಹೊಕ್ಕಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಬಾಲಕನ ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಕೆಳಕ್ಕೆ ಇಳಿದಿದ್ದ ತೆಂಗಿನ ಗರಿ ಮತ್ತು ಸ್ಟೀಲ್ ಚೈನ್‌ನ್ನು ಹೊರತೆಗೆದಿದ್ದಾರೆ.

    ಸಕಾಲದಲ್ಲಿ ದೊರೆತ ಚಿಕಿತ್ಸೆಯಿಂದಾಗಿ ಬಾಲಕ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    Post Views: 251

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.