Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬೈಕ್ ಕಳವು; ಇಬ್ಬರ ಬಂಧನ
    Uncategorized

    ಬೈಕ್ ಕಳವು; ಇಬ್ಬರ ಬಂಧನ

    February 13, 2025
    Share

    ಉಡುಪಿ : ಪಡಿಬಿದ್ರಿ ಪೇಟೆಯಲ್ಲಿ 20 ದಿನಗಳ ಹಿಂದೆ ಬುಲೆಟ್ ಬೈಕ್ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

    ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ನಿವಾಸಿ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ.ಕೆ ಯಾನೆ ತಾಜು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

    ಏನಿದು ಪ್ರಕರಣ ?

    ಜನವರಿ 21ರಂದು ರಾತ್ರಿ ಮುಂಡ್ಕೂರು ನಿವಾಸಿ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ಬುಲೆಟ್ ಬೈಕ್‍ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಬೈಕನ್ನು ಕಳವು ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ : ರಿಕ್ಷಾ ಹಾಗೂ ಹೊಂಡಾ ಆಕ್ಟಿವಾ ನಡೆವೆ ಅಪಘಾತ; ಸವಾರರಿಗೆ ಗಾಯ ಸದ್ಯ ಪೊಲೀಸರ ಬಲೆಗೆ ಬಿದ್ದ ಕಳ್ಳರಿಂದ ಪಡುಬಿದ್ರಿಯಲ್ಲಿ ಕಳವು ಮಾಡಿದ ಬುಲೆಟ್ ಮತ್ತು ಕಳ್ಳತನ ಸಮಯ ಉಪಯೋಗಿಸಿದ ಕಾರನ್ನು ಸ್ವಾಧೀನ ಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 134

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.