ಮಂಗಳೂರು: ಸಿಗರೇಟ್ ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸಾರ್ವಜನಿಕ ಸ್ಥಳದಲ್ಲಿ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿ ಶಾಮಿಲ್ (21) ಹಾಗೂ ಬಿಜೈ ನ್ಯೂ ರೋಡ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೇಟು ಸೇದುತ್ತಿದ್ದ ಮಲಪ್ಪುರ ಜಿಲ್ಲೆಯ ಪೆರುಂಪಡಪ್ಪು ನಿವಾಸಿ ಸಫ್ವಾನ್ (22) ಬಂಧಿತ ಆರೋಪಿಗಳು.

ಇವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರಗ್ಸ್ ಸೇದುತ್ತಿದ್ದ ಬಗ್ಗೆ ಅನುಮಾನಗೊಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದರು.
ಇದೀಗ ಅವರನ್ನು ವಶಪಡಿಸಿಕೊಂಡು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಡ್ರಗ್ಸ್ ಸೇವಿಸಿರೋದು ದೃಢಪಟ್ಟಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.