ಮಂಗಳೂರು: ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಆ.3 ರಿಂದ 5ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, “ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಭಾರೀ ಗಾಳಿ-ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.
ಮಂಗಳವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆಯಲ್ಲಿ ಸುಬ್ರಹ್ಮಣ್ಯದಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾಗಿದ್ದು, 283.5 ಮಿ.ಮೀ. ಮಳೆಯಾಗಿದೆ. ಸಂಪಾಜೆಯಲ್ಲಿ 140 ಮಿ.ಮೀ. ಮಳೆಯಾಗಿದೆ.
ಬೆಳ್ತಂಗಡಿಯಲ್ಲಿ 48.3 ಮಿ.ಮೀ., ಬಂಟ್ವಾಳ 37.8, ಮಂಗಳೂರು 42.4, ಪುತ್ತೂರು 38.7, ಸುಳ್ಯ 140.8 ಮಿ.ಮೀ., ಮೂಡುಬಿದಿರೆ 34.7, ಕಡಬ 99.3 ಮಿ.ಮೀ. ಮಳೆಯಾಗಿದೆ.