Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – 120 ಕೆಜಿ ಮಾದಕ ದ್ರವ್ಯ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – 120 ಕೆಜಿ ಮಾದಕ ದ್ರವ್ಯ ವಶಕ್ಕೆ

    February 18, 2025
    Share

    ಮಂಗಳೂರು: ಮೀನು ಸಾಗಾಟದ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಆಲ್ಟೋ ಕಾರಿನಲ್ಲಿ ಬರೋಬ್ಬರಿ 120 ಕೆಜಿ ನಿಷೇಧಿತ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿ ಮಂಗಳೂರು ಸಿಸಿಬಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ, ಉಪ್ಪಳ ನಿವಾಸಿ ಮೊಯ್ದಿನ್ ಶಬ್ಬಿರ್(38), ಮಹಾರಾಷ್ಟ್ರ, ಥಾಣೆ, ಕಲ್ಯಾಣ, ಡೊಂಬಿವಲಿ(ವೆಸ್ಟ್), ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲಪ್ಪುಯ ಜಿಲ್ಲೆಯ ಚೆರ್ತಲಾ ಚಾರುಮಂಗಳಂ ನಿವಾಸಿ ಅಜಯ್ ಕೃಷ್ಣ(33), ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ನರವಾನ ತಾಲೂಕು, ಅಮರಗಡ್ ನಿವಾಸಿ ಜೀವನ್ ಸಿಂಗ್(35) ಬಂಧಿತ ಆರೋಪಿ. ಫೆ.17ರಂದು ಆಂಧ್ರಪ್ರದೇಶದಿಂದ ಮಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಟೋ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2 ವಾಹನಗಳನ್ನು ಪತ್ತೆ ಹಚ್ಚಿದ್ದಾರೆ. ವಾಹನಗಳಲ್ಲಿದ್ದ 35 ಲಕ್ಷ ಮೌಲ್ಯದ 119 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ ಎರಡು ವಾಹನಗಳು ಸೇರಿದಂತೆ 5 ಮೊಬೈಲ್ ಫೋನ್‌ ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 51,00,000/- ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 193

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.