Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣಕ್ಕೆ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣಕ್ಕೆ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

    February 20, 2025
    Share

    ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಶಿಕ್ಷೆಗೊಳಗಾದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗೋಪಾಲ ಗೌಡ ಯಾನೆ ಗೋಪಾಲಕೃಷ್ಣ ಗೌಡ, ಮಂಗಳೂರಿನ ಕುಡುಪು ಪಾಲ್ಡನೆಯ ಎ.ದಮಯಂತಿ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ವಸಂತ ಗೌಡ ಯಾನೆ ರಾಮಣ್ಣ ಗೌಡ, ನೆರಿಯ ಗ್ರಾಮದ ಪುಷ್ಪಲತಾ ಎಂದು ಗುರುತಿಸಲಾಗಿದೆ.

    ಆರೋಪಿ ಗೋಪಾಲ ಗೌಡನಿಗೆ 3 ವರ್ಷಗಳ ಕಾಲ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ ಮತ್ತೆ 6 ತಿಂಗಳ ಸಾದಾ ಸಜೆ, ಆರೋಪಿಗಳಾದ ದಮಯಂತಿ, ವಸಂತ ಗೌಡ, ಪುಷ್ಪಲತಾರಿಗೆ 2 ವರ್ಷ ಗಳ ಶಿಕ್ಷೆ ಮತ್ತು ತಲಾ 15 ಸಾವಿರ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ ಮತ್ತೆ 3 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿದೆ. ಐಪಿಸಿ ಸೆಕ್ಷನ್ 506ರ ಅಡಿ ನಾಲ್ಕು ಮಂದಿ ಆರೋಪಿಗಳಿಗೆ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ತೀರ್ಪು ನೀಡಿದ್ದಾರೆ. ದಂಡದ ಮೊತ್ತ 1.45 ಲಕ್ಷ ರೂ.ವನ್ನು ಗಾಯಾಳು ಸುಂದರ ಮಲೆಕುಡಿಯ ಅವರಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ.

    2015ರ ಜು. 26ರಂದು ಸಂಜೆ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿನ ಜಮೀನಿನಲ್ಲಿದ್ದ ಕಾಡನ್ನು ರೇವತಿ ಮತ್ತು ಬಿ.ಎ. ಸುಂದರ ಮಲೆಕುಡಿಯ ಅವರು ಮಕ್ಕಳಾದ ಪೂರ್ಣೇಶ್ ಮತ್ತು ಪೂರ್ಣಿಮಾರೊಂದಿಗೆ ಕಡಿಯುತ್ತಿದ್ದಾಗ ಆರೋಪಿಗಳು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದದಿಂದ ಬೈದು ಕಳೆ ಕತ್ತರಿಸುವ ಯಂತ್ರದಿಂದ ಸುಂದರ ಮಲೆಕುಡಿಯರ ಕೈಬೆರಳುಗಳನ್ನು ತುಂಡರಿಸಿ ಗಂಭೀರ ಗಾಯಗೊಳಿಸಿದ್ದರು. ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಬಂಟ್ವಾಳ ಉಪವಿಭಾಗದ ಅಂದಿನ ಡಿವೈಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿದ್ದರು. ವೆನಾಕ್ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ನಮ್ರತ್ ಭಾನು ಮತ್ತು ಎ.ಜೆ. ಆಸ್ಪತ್ರೆಯ ವೈದ್ಯ ಡಾ. ದಿನೇಶ್ ಕದಮ್, ಫೊರೆನ್ಸಿಕ್ ಲ್ಯಾಬ್‌ನ ಡಿಎನ್‌ಎ ವಿಭಾಗದ ತಜ್ಞ ಡಾ. ಶಹನಾಝ್ ಫಾತಿಮಾ ಸಹಿತ 29 ಮಂದಿ ಸರಕಾರದ ಪರವಾಗಿ ಸಾಕ್ಷಿ ನುಡಿದಿದ್ದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

    Post Views: 133

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.