Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು..
    ಕ್ರೈಂ ಸ್ಟೋರಿ

    ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು..

    February 26, 2025
    Share

    ಕೋಲ್ಕತ್ತಾ: ಶವ ತುಂಬಿದ್ದ ಸೂಟ್​ಕೇಸ್ ನದಿಗೆ​ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್​ಕೇಸ್​ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

    ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ ಘೋಷ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಮೃತದೇಹವನ್ನು ಫಲ್ಗುಣಿ ಘೋಷ್ ಅವರ ಮಾವನ ಸಹೋದರಿ ಸುಮಿತಾ ಘೋಷ್ (55) ಎಂದು ಗುರುತಿಸಲಾಗಿದೆ. ಉತ್ತರ ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಮಹಿಳೆಯರು ನೀಲಿ ಬಣ್ಣದ ಟ್ರಾಲಿ ಬ್ಯಾಗ್‌ನೊಂದಿಗೆ ಕಾಣಿಸಿಕೊಂಡಿದ್ದರು. ಸ್ಥಳೀಯರು ಅವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಅವರ ಬಳಿ ಕೇಳಿಯೇ ಬಿಡಬೇಕು ಎಂದು ನಿರ್ಧರಿಸಿದರು. ಆರಂಭದಲ್ಲಿ ಮಹಿಳೆಯರು ಬ್ಯಾಗ್ ತೆರೆಯಲು ನಿರಾಕರಿಸಿದರು. ಆಮೇಲೆ ಗಟ್ಟಿ ಧ್ವನಿಯಲ್ಲಿ ಕೇಳಿದ ಬಳಿಕ ತಮ್ಮ ಸಾಕು ನಾಯಿ ಸತ್ತು ಹೋಗಿತ್ತು ಅದರ ದೇಹವನ್ನು ನೀರಿನಲ್ಲಿ ಹಾಕಲು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದರು. ಇದು ಮತ್ತಷ್ಟು ಅನುಮಾನಕ್ಕೆ ಕಾರಣವಾಯಿತು, ಏನೇ ಆದರೂ ಬ್ಯಾಗ್​ನ ಜಿಪ್​ ತೆಗೆಯಲು ಸಿದ್ಧರಿರಲಿಲ್ಲ.

    ಈ ಮಧ್ಯೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕೆ ಬಂದರು. ಟ್ರಾಲಿ ಬ್ಯಾಗ್ ಅನ್ನು ಬಲವಂತವಾಗಿ ತೆರೆದಾಗ ಒಳಗೆ ಮಹಿಳೆಯ ರಕ್ತಸಿಕ್ತ ಶವ ಪತ್ತೆಯಾಗಿದೆ. ನಂತರ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಂಧಿಸಲಾಯಿತು.
    ಫಲ್ಗುಣಿ ಹೇಳಿಕೆಯ ಪ್ರಕಾರ, ಮೃತ ಸುಮಿತಾ ತನ್ನ ಮಾವನ ಸಹೋದರಿ. ಅಸ್ಸಾಂನ ಜೋರ್ಹತ್ ಮೂಲದ ಸುಮಿತಾ ತನ್ನ ಪತಿಯಿಂದ ಬೇರ್ಪಟ್ಟಿದ್ದು, ಫೆಬ್ರವರಿ 11 ರಿಂದ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ತಾಯಿ-ಮಗಳೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಸೋಮವಾರ ಸಂಜೆ ಫಲ್ಗುಣಿ ಜೊತೆ ನಡೆದ ತೀವ್ರ ವಾಗ್ವಾದದಲ್ಲಿ ಸುಮಿತಾ ಸಾವನ್ನಪ್ಪಿದ್ದಾರೆ ಎಂದು ಕೋಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಜಗಳ ನಡೆದಿತ್ತು. ಫಲ್ಗುಣಿ ಮೃತಳನ್ನು ಗೋಡೆಗೆ ತಳ್ಳಿದ್ದರಿಂದ ಆಕೆ ಪ್ರಜ್ಞೆತಪ್ಪಿ ಬಿದ್ದಿದ್ದಳು. ಪ್ರಜ್ಞೆ ಮರಳಿ ಬಂದಾಗ, ದೊಡ್ಡ ಜಗಳವೇ ನಡೆಯಿತು. ಫಲ್ಗುಣಿ ಅವಳ ಮುಖ ಮತ್ತು ಕುತ್ತಿಗೆಗೆ ಇಟ್ಟಿಗೆಯಿಂದ ಹೊಡೆದ ಕಾರಣ ಆಕೆ ಸಾವನ್ನಪ್ಪಿದ್ದಳು. ನಂತರ ತಾಯಿ-ಮಗಳು ಶವವನ್ನು ಟ್ರಾಲಿ ಬ್ಯಾಗಿನಲ್ಲಿ ಹಾಕಿ ನದಿಗೆ ಎಸೆಯಲು ಪ್ರಯತ್ನಿಸಿದ್ದ

    Post Views: 268

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.