Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಕೋಟಿ ಹಣ ಪತ್ತೆ ಪ್ರಕರಣ; ತಲ್ಲತ್‌ ಗ್ಯಾಂಗ್‌ನ ಇಬ್ಬರು ಅರೆಸ್ಟ್
    ಕರಾವಳಿ ಸುದ್ದಿ

    ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಕೋಟಿ ಹಣ ಪತ್ತೆ ಪ್ರಕರಣ; ತಲ್ಲತ್‌ ಗ್ಯಾಂಗ್‌ನ ಇಬ್ಬರು ಅರೆಸ್ಟ್

    February 28, 2025
    Share

    ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ  ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.

    ಆದರೆ. ಅಚ್ಚರಿಯೆಂಬಂತೆ ಅದರಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ಇದಾದ ಕೆಲವು ದಿನದ ಬಳಿಕ ರಾಜೇಶ್‌ ಪವಾರ್‌ ಮತ್ತು ಕಾರಿನ ಚಾಲಕರು ಅಂಕೋಲಾ ಠಾಣೆಗೆ ತೆರಳಿ ದರೋಡೆ ಕುರಿತು ದೂರು ದಾಖಲಿಸಿದ್ದರು.
    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಕಾರವಾರ ಪೊಲೀಸರು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ತಲ್ಲತ್‌ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ದೋಚಿರುವುದಾಗಿ ಒಪ್ಪಿಕೊಂಡಿದ್ದಾರೆ.
    ಮಂಗಳೂರು ಹೊರವಲಯದ ಅಡ್ಯಾರ್‌, ಬಜಾಲ್‌ನಲ್ಲಿ ಸಕ್ರಿಯವಾಗಿರುವ ತಲ್ಲತ್‌ ಗ್ಯಾಂಗ್‌ನ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ದರೋಡೆ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಈ ಇಬ್ಬರ ಬಂಧನದ ಬಳಿಕ ಮತ್ತೂ ಕೆಲವೊಂದು ಮಹತ್ವದ ಮಾಹಿತಿ ತಿಳಿದಿದೆ. ಈ ದರೋಡೆ ಸಂಬಂಧಿತ ತಲ್ಲತ್ ಗ್ಯಾಂಗ್‌ನ ಪ್ರಮುಖ ಆರೋಪಿಗಳು ತಲೆಮರಿಸಿಕೊಂಡಿದ್ದು, ತೀವ್ರ ತನಿಖೆ ನಡೆಯುತ್ತಿದೆ.

    Post Views: 379

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.