ಮಂಗಳೂರು : ನಗರದಲ್ಲಿ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುನೀರ್ @ ಅಣ್ಣ ಮುನೀರ್(48), ಕಸಬಾ ಬೆಂಗರೆ, ಮಂಗಳೂರು. ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

ಈತನು ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಳವು, ಕೊಲೆಗೆ ಯತ್ನ, ದರೋಡೆಗೆ ಯತ್ನ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು.