ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ.
ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾ.11 ರಂದು ಪ್ರಕಾಶ್ ಗೋಪಾಲ್ ಮೂಲ್ಯನನ್ನು ಮೂಡಬಿದ್ರೆಯಲ್ಲಿ ಪೊಲೀಸರು ಬಂಧಿಸಿದ್ದರು. ನೆರೆ ಮನೆಯ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ.
ಜೈಲಿಗೆ ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.