ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 50 ಗ್ರಾಂ ತೂಕದ 75 ಪೇಲೋಡ್ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ.
ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ 75 ಪುಟ್ಟ ಉಪಗ್ರಹಗಳು (ಪೇಲೋಡ್) ಈ ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಿದವು.