Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗ- ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಮೃತ್ಯು
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗ- ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಮೃತ್ಯು

    March 27, 2025
    Share

    ಉಡುಪಿ : ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ಸಂಭವಿಸಿದೆ.

    ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್‌ ಮೂಲ್ಯ (51)ಮೃತಪಟ್ಟ ಬೈಕ್‌ ಸವಾರ. ರಮೇಶ್‌ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

    ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತರ ತಾಯಿ ಎಂದು ತಿಳಿದು ಬಂದಿದೆ.

    ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್‌-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಢಿಕ್ಕಿ ಹೊಡೆದು ಬೈಕ್‌ ಸವಾರ ನಿವಾಸಿ ರಮೇಶ್‌ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ.24 ರಂದು ರಾತ್ರಿ ಅವರು ಮೃತಪಟ್ಟಿದ್ದರು.

    ಅಪಘಾತದಿಂದ ಮೃತಪಟ್ಟ ರಮೇಶ್‌ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃತಪಟ್ಟಿದ್ದಾರೆ.

    Post Views: 238

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.