Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದ್ರೆ: ಅಕ್ರಮ ದನ ಸಾಗಾಟ ಆರೋಪ – ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ..! ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮೂಡಬಿದ್ರೆ: ಅಕ್ರಮ ದನ ಸಾಗಾಟ ಆರೋಪ – ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ..! ಇಬ್ಬರ ಬಂಧನ

    March 30, 2025
    Share

    ಮೂಡಬಿದ್ರೆ: ಅಕ್ರಮ ದನ ಸಾಗಾಟದ ಆರೋಪದಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಗಂಭೀರ ಹಲ್ಲೆ ನಡೆಸಿ ವಾಹನವನ್ನು ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಕಾರ್ಯಕರ್ತರೆನ್ನಲಾದ ಇಬ್ಬರನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು  ಬಂಧಿಸಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

    ಕಡಂದಲೆಯ ಸುಧೀರ್ ಶೆಟ್ಟಿ ಹಾಗೂ ಸುರತ್ಕಲ್‌ನ ಧನರಾಜ್ ಬಂಧಿತ ಆರೋಪಿಗಳಾಗಿದ್ದು, ಇತರ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

    ಮೂಡುಬಿದಿರೆ ಬಿರಾವಿನ ಕೂಸಪ್ಪ ಪೂಜಾರಿ ಅವರು ತನ್ನ ಪರಿಚಯದ ಕಾರ್ಕಳದ ಬಜಗೋಳಿಯ ಮನೆಯಿಂದ ಗೀರ್ ತಳಿಯ ಹೋರಿಯೊಂದನ್ನು ಸಂಗಬೆಟ್ಟುವಿನ ಅಬ್ದುಲ್ ರಹ್ಮಾನ್ ಅವರ ವಾಹನದಲ್ಲಿ ಶುಕ್ರವಾರ ಸಂಜೆ ಮೂಡುಬಿದಿರೆಯತ್ತ ತರುತ್ತಿದ್ದರು.ಗೀರ್ ತಳಿಯ ಹೋರಿಯನ್ನು ಗರ್ಭದಾರಣೆಯ ವಿಷಯದಲ್ಲಿ ತರುತ್ತಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಬೆಳುವಾಯಿ ಬಳಿ ವಾಹನವನ್ನು ತಡೆದು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರೆನ್ನಲಾದ ಆರೋಪಿಗಳು ವಾಹನದಲ್ಲಿದ್ದ ಕೂಸಪ್ಪ ಪೂಜಾರಿ ಹಾಗೂ ಅಬ್ದುಲ್ ರಹ್ಮಾನ್ ಅವರಿಬ್ಬರ ಮೇಲೂ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಸಾಗಾಟಕ್ಕೆ ಸಂಬಂಧಿಸಿ ದಾಖಲೆಪತ್ರಗಳನ್ನು ತೋರಿಸಿದರೂ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮೂಡುಬಿದಿರೆ ಆಳ್ವಾಸ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಅವರು, ಸುಧೀರ್ ಶೆಟ್ಟಿ ಮತ್ತು ಧನರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

    ಕೂಸಪ್ಪ ಅವರು ನೀಡಿರುವ ದೂರಿನಂತೆ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದ್ದು, ಉಳಿದ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ.

    Post Views: 267

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.