ಕಾರ್ಕಳ: ಕಾರ್ಕಳದ ಅಜೆಕಾರಿನಲ್ಲಿ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕೃಷ್ಣ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದರು. ಇಲ್ಲಿಯವರೆಗೆ ಅವರು ಹಾಕುತ್ತಿದ್ದ ಜಾಮೀನು ಅರ್ಜಿಯನ್ನು ಕೂಡಾ ನ್ಯಾಯಾಲಯ ರಿಜೆಕ್ಟ್ ಮಾಡುತ್ತಿತ್ತು. ಆದರೆ ಇದೀಗ ಆರೋಪಿ ದಿಲೀಪ್ ಹೆಗ್ಡೆಗೆ ರಾಜ್ಯ ಹೈಕೋರ್ಟ್ ನಿನ್ನೆ ಜಾಮೀನು ನೀಡಿ ಆದೇಶಿಸಿದೆ.

ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆ ಆತ ಹೈಕೋರ್ಟ್ ಗೆ ಅರ್ಜಿ ಹಾಕಿದ್ದನು.
ಆರೋಪಿ ಪರವಾಗಿ ವಕೀಲರು ನಿಶ್ಚಿತ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.