Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ..!
    ಇತ್ತೀಚಿನ ಸುದ್ದಿ

    ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ..!

    April 10, 2025
    Share

    ಉಡುಪಿ: ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣನವರ್‌ ತಪ್ಪಿತಸ್ಥ ಎಂದು ತೀರ್ಮಾನಿಸಿ 1 ವರ್ಷ ಜೈಲು ಶಿಕ್ಷೆ ಹಾಗು 19,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. 

    ಮಂಜುನಾಥ ಮಡಿವಾಳ ಶಿಕ್ಷೆಗೆ ಗುರಿಯಾದ ಆರೋಪಿ.

    2019ರ ಮೇ 6ರಂದು ಸಂಜೆ 4 ಗಂಟೆಗೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ವಿಟಲ ಪರವ ಅವರು ಮುದ್ದೂರು ಎನ್ನುವಲ್ಲಿರುವ ಸತ್ಯೇಶ ಉಡುಪ ಅವರ ಅಂಗಡಿ ಕಟ್ಟಡದ ಬಳಿ ಹೋದಾಗ ನಾಲ್ಕೂರು ಗ್ರಾಮದ ನಿವಾಸಿಯಾದ ಆರೋಪಿ ಮಂಜುನಾಥ ಮಡಿವಾಳ ತನ್ನ ಆಟೋ ರಿಕ್ಷಾದಲ್ಲಿ ಅಲ್ಲಿಗೆ ಬಂದು ವಿಟಲ ಪರವ ಅವರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು.

    ಅನಂತರ ವಿಟಲ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದಿನ ಹೆಬ್ರಿ ಠಾಣೆಯ ಪಿಎಸ್‌ಐ ಸತೀಶ್‌ ಸಿ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರ್ಕಳ ಉಪ ವಿಭಾಗದ ಅಂದಿನ ಸಹಾಯಕ ಪೊಲೀಸ್‌ ಅಧೀಕ್ಷಕ ಪಿ. ಕೃಷ್ಣಕಾಂತ್‌ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

    ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 323, 504 ಹಾಗೂ ಎಸ್‌.ಸಿ./ಎಸ್‌.ಟಿ. ಕಾಯ್ದೆ ಕಲಂ ಅಡಿಯ ಅಪರಾಧಕ್ಕಾಗಿ ತಲಾ 6 ತಿಂಗಳ ಜೈಲು ಶಿಕ್ಷೆ 2,500 ರೂ. ದಂಡ, 324, 506 ಹಾಗೂ ಎಸ್‌.ಸಿ/ಎಸ್‌.ಟಿ.ಕಾಯ್ದೆ ಕಲಂ 3(1) (ಎಸ್‌) ಮತ್ತು 3(2)(ವಿ-ಎ) ರಡಿಯ ಅಪರಾಧಕ್ಕಾಗಿ ತಲಾ 1 ವರ್ಷ ಜೈಲು ಶಿಕ್ಷೆ 3 ಸಾವಿರ ರೂ. ದಂಡ ವಿಧಿಸಿದೆ.

    ಆರೋಪಿಯಿಂದ ವಸೂಲಾದ ದಂಡದ ಮೊತ್ತದ ಪೈಕಿ 10 ಸಾವಿರ ರೂ.ದೂರುದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಬೇಕು ಎಂದು ಆದೇಶಿಸಿದೆ. ಸರಕಾರದ ಪರ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

    Post Views: 264

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.