Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ತಪಾಸಣೆ ವೇಳೆ ನಿಲ್ಲಿಸದೆ ಪರಾರಿಯಾಗಿದ್ದ ಕಾರಿನಲ್ಲಿ ಚಿನ್ನಾಭರಣ, ಬೆಳ್ಳಿ ಪತ್ತೆ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ತಪಾಸಣೆ ವೇಳೆ ನಿಲ್ಲಿಸದೆ ಪರಾರಿಯಾಗಿದ್ದ ಕಾರಿನಲ್ಲಿ ಚಿನ್ನಾಭರಣ, ಬೆಳ್ಳಿ ಪತ್ತೆ..!

    April 10, 2025
    Share

    ಕಾಸರಗೋಡು: ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಪತ್ತೆಯಾದ ಘಟನೆ ಕಾಸರಗೋಡಿನ ಆದೂರು ಚೆಕ್ ಪೋಸ್ಟ್ ಬಳಿ ನಡೆದಿದೆ.

    ಕಾರನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಸುಳ್ಯ ಕಡೆಯಿಂದ ಬಂದ ಬಿಳಿ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದರೂ ಪರಾರಿಯಾಗಿದ್ದು, ಎಂಟು ಕಿ.ಮೀ ತನಕ ಅಬಕಾರಿ ಅಧಿಕಾರಿಗಳು ಕಾರನ್ನು ಬೆನ್ನಟ್ಟಿದರು. ಮುಳ್ಳೇರಿಯ- ಬದಿಯಡ್ಕ ರಸ್ತೆಯ ಬೆಳ್ಳಿಗೆ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಪರಾರಿಯಾದರು.

    ಕಾರನ್ನು ತಪಾಸಣೆ ನಡೆಸಿದಾಗ 140 ಗ್ರಾಂ ಚಿನ್ನಾಭರಣ , 339. 2 ಗ್ರಾಂ ಬೆಳ್ಳಿ ಆಭರಣ , 1.17 ಲಕ್ಷ ರೂ .ನಗದು, ತುಂಡರಿಸಿದ ಬೀಗ, ಗ್ಯಾಸ್ ಕಟ್ಟರ್, ನಾಲ್ಕು ಮೊಬೈಲ್ ಮೊದಲಾದವು ಪತ್ತೆಯಾಗಿದೆ. ಕಾರಿನ ನಂಬರ್‌ ನಕಲಿ ಎಂದು ತನಿಖೆಯಿಂದ ತಿಳಿದು ಬಂದಿದೆ. ಕಳವುಗೈದು ಪರಾರಿಯಾಗುತ್ತಿದ್ದುದಾಗಿ ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪರಾರಿಯಾದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

    Post Views: 177

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.