ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವಪತ್ತೆಯಾಗಿತ್ತು ಮಸೀದಿಯವರು ಪ್ರಕರಣ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ” ಎಂದರು.

ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣವಾಗಿದ್ದು ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದರು.
ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ. ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.