ಕಾಸರಗೋಡು: ಸೇತುವೆ ಮೇಲಿಂದ ನದಿಗೆ ಹಾರಿದ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಮೃತಪಟ್ಟವರನ್ನು ಚೆಂಗಳದ ಶರೀಫ್ (45) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ಶರೀಫ್ ಚಂದ್ರಗಿರಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದು, ಪ್ರತ್ಯಕ್ಷದರ್ಶಿಯೋರ್ವ ನೀಡಿದ ಮಾಹಿತಿಯಂತೆ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನಾಗರಿಕರು ಶೋಧ ನಡೆಸಿದ್ದರು.
ರಾತ್ರಿಯಾದರೂ ಮೃತದೇಹ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.