ಉಡುಪಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ ಒಂಭತ್ತು ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ. ಆದೇಶ ನೀಡಿದ್ದಾರೆ.

ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಗೊತ್ತಿದ್ದರೂ ಕೂಡಾ ಗಂಗೊಳ್ಳಿ, ಬೈಂದೂರು ಮತ್ತು ಕೊಲ್ಲೂರು ಠಾಣೆಗಳ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಇವರು ಮಾಹಿತಿ ನೀಡದ ಕಾರಣ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬೇರೆ ವ್ಯಾಪ್ತಿಯ ಪೊಲೀಸರು ದಾಳಿ ನಡೆಸಿದ್ದರು.