Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ನಾಲ್ವರು ಸೇರಿ ಒಟ್ಟು 7 ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ರಾಜ್ಯದ ನಾಲ್ವರು ಸೇರಿ ಒಟ್ಟು 7 ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

    April 21, 2025
    Share

    ಬೆಂಗಳೂರು : ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

    ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಿನ್ನಲೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಅನುಸಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

    ನ್ಯಾ. ಹೇಮಂತ್ ಚಂದನ ಗೌಡರ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣನ್ ನಟರಾಜನ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ, ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾ.ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾ.ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ಮತ್ತು ನ್ಯಾ.ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.