ಉಡುಪಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು ಸವಾರ ಅಲ್ಲಿಂದ ಎಸ್ಕೇಪ್ ಆಗಿರುವ ಘಟನೆ ಉಡುಪಿಯ ಕಲ್ಸಂಕ ಸಮೀಪ ನಡೆದಿದೆ. ಗಾಯಾಳು ಮಹಿಳೆಯನ್ನು ಸ್ಥಳೀಯ ನಿವಾಸಿ ಲಲಿತಾ ಆಚಾರ್ಯ ಎಂದು ಗುರುತಿಸಲಾಗಿದೆ.

ಅಂಬಾಗಿಲು ಉಡುಪಿ ರಸ್ತೆಯ ಪಾಡಿಗಾರು ಎಂಬಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದು ಆ ಸಂದರ್ಭ ಅದೇ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಅವರನ್ನು ಗಮನಿಸಿ ನಿಧಾನಗತಿಯಲ್ಲಿ ರಿಕ್ಷಾ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಆದರೆ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅತೀ ವೇಗದಿಂದ ಬಂದ ಬೈಕ್ ಮಹಿಳೆಗೆ ಗುದ್ದಿದೆ.
ಗುದ್ದಿದ ರಭಸಕ್ಕೆ ಮಹಿಳೆಗೆ ತೀವ್ರತರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಮಾಡಿದ ಸವಾರನಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.