Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ; ಪ್ರವೀಣ್‌ ಹತ್ಯೆಯ ಪ್ರಮುಖ ಹಂತಕನ ಬಂಧನ ಕುರಿತು ಚರ್ಚೆ
    ಇತ್ತೀಚಿನ ಸುದ್ದಿ

    BIGG NEWS: ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ; ಪ್ರವೀಣ್‌ ಹತ್ಯೆಯ ಪ್ರಮುಖ ಹಂತಕನ ಬಂಧನ ಕುರಿತು ಚರ್ಚೆ

    August 10, 2022
    Share

    ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ.ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ.
    ಎನ್ ಐ ಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ
    ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
    ಎನ್ ಐ ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ.

    ಅವರ ಫೋಟೋ,ಮನೆ ವಿಳಾಸ,ತಂದೆ-ತಾಯಿ,ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ.
    ಆವಾಗವಾಗ ಅವರ ಸ್ಥಳಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ.
    ಆರೋಪಿಗಳಿಗೆ ಪಿಎಫ್‌ಐ ಲಿಂಕ್ ವಿಚಾರವಾಗಿ ಮಾತನಾಡಿದ ಅವರು,ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ.
    ದಾಖಲೆ ಜೊತೆಗೆ ಮಾತನಾಡುತ್ತೇವೆ,ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ.ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್‌ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ. ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ.
    ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ. ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ಮಾಡುತ್ತೇವೆ. ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ
    ಎನ್ ಐ ಎ ಅಧಿಕಾರಿಗಳು, ಮಂಡ್ಯ,ಚಾಮರಾಜನಗರ ಹಾಸನ,ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.

    Post Views: 191

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.