Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ – ಐವರ ಸ್ಥಿತಿ ಗಂಭೀರ!!
    ಇತ್ತೀಚಿನ ಸುದ್ದಿ

    ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ – ಐವರ ಸ್ಥಿತಿ ಗಂಭೀರ!!

    May 14, 2025
    Share

    ಮಲ್ಪೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

    ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ ಒಮ್ಮೆಲೆ ದೊಡ್ಡ ಸದ್ದು ಕೇಳಿಸಿತು. ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿದರು. ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಗಾಯಗೊಂಡ ಐವರು ಮೀನುಗಾರರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇದರ ಹಿಂದಿನ ಅಸಲಿ ಎತ್ತು ಬೇರೆ ಇದೆ.

    ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನವಷ್ಟೆ. ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್‌ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

    ಈ ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು. ಅನಂತರ ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್‌ ಹಾಗೂ ಅಧಿಕಾರಿಗಳು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.

    Post Views: 445

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.