Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳು ವಶಕ್ಕೆ

    May 16, 2025
    Share

    ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

    ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ.ಸೊತ್ತು ಹಾಗೂ ಖಾಲಿ 5 ಪ್ಲಾಸ್ಟಿಕ್ ಕವರ್, ರೂ.30 ಲಕ್ಷ ಮೌಲ್ಯದ ಕಾರು, ಆರೋಪಿಗಳ ಕೈಯಲ್ಲಿದ್ದ ರೂ.45 ಸಾವಿರ ಮೌಲ್ಯದ 4 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಸಂಶಯದ ಮೇಲೆ ವಿಚಾರಿಸಿದಾಗ ಇವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುವ ವಿಚಾರ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ನಂದಾವರದ ಗೌಸಿಯಾ ಎಂಬಲ್ಲಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ನಿಷೇಧಿತ ನಿದ್ರಾಜನಕ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದ ವೇಳೆ ಎಸ್.ಐ.ರಾಮಕೃಷ್ಣ ನೇತ್ರತ್ವದಲ್ಲಿ ದಾಳಿ ಮಾಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 225

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.